ಉತ್ತರ ಪ್ರದೇಶ
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಹಿಂದಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್ ಬಳಿ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಮೂಲದ ನಾಲ್ವರು ಸೇರಿ ಒಟ್ಟು 6 ಮಂದಿ ಪ್ರಾಣಕಳೆದುಕೊಂಡಿದ್ದಾರೆ.ಟಿಟಿ ವಾಹನದಲ್ಲಿ 19 ಮಂದಿ ವಾಪಸಾಗುತ್ತಿದ್ದರು ಆಗ ಲಾರಿಗೆ ವಾಹನ ಡಿಕ್ಕಿ ಹೊಡೆದಿದೆ.
ಬೆಳಗಾವಿಯ ನಾಲ್ವರು ಇಂದೋರ್‌ನ ಇಬ್ಬರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ಪುರ ಪೊಲೀಸ್ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ಘಟನೆ ಬೆಳಗಿನ ಜಾವ 2:30 ಕ್ಕೆ ನಡೆದಿದೆ. ಅಪಘಾತಕ್ಕೀಡಾದ ಟೆಂಪೋ ಟ್ರಾವೆಲರ್‌ನಲ್ಲಿದ್ದ ಪ್ರಯಾಣಿಕರು ಕರ್ನಾಟಕದ ನಿವಾಸಿಗಳು. ಮಾನ್ಪುರ ಭೈರವ ಘಾಟ್‌ನಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಮುಂದೆ ಚಲಿಸುತ್ತಿದ್ದ ಟ್ಯಾಂಕರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ.
ಆ ಮೂಲಕ ಹಾದುಹೋಗುತ್ತಿದ್ದ ಇಬ್ಬರು ಬೈಕ್ ಸವಾರರು ಸಹ ಡಿಕ್ಕಿ ಹೊಡೆದು ಸಾವನ್ನಪ್ಪಿದರು, ನಾಲ್ವರು ಮೃತರನ್ನು ಇನ್ನೂ ಗುರುತಿಸಲಾಗಿಲ್ಲ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ಪ್ರಯಾಣಿಕರ ವಾಹನವು ಚೂರುಚೂರಾಗಿತ್ತು. ಮೃತ ಬೈಕ್ ಸವಾರರ ಗುರುತು ಇನ್ನೂ ಪತ್ತೆಯಾಗಿಲ್ಲ.
ಗಾಯಾಳುಗಳನ್ನು ಇಂದೋರ್‌ನ ಎಂವೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸಂಪೂರ್ಣ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರಯಾಣಿಕರು ಉಜ್ಜಯಿನಿಯ ಪ್ರಸಿದ್ಧ ಮಹಾಕಾಳ ದೇವಸ್ಥಾನಕ್ಕೆ ಭೇಟಿ ನೀಡಿ ಕರ್ನಾಟಕದ ಬೆಳಗಾವಿಗೆ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
