ಲಾರಿ ಕಾರಿನ ನಡುವೆ ಅಪಘಾತ : 6 ಸಾವು

ಬೆಂಗಳೂರು: 

     ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ.

     ಕುಷ್ಟಗಿ ತಾಲ್ಲೂಕು ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 2ಲಕ್ಷ ಪರಿಹಾರ ಘೋಷಿಸಿದ್ದಾರೆ. 

     ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಸಿಎಂ ತಿಳಿಸಿದ್ದಾರೆ.

     ‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್‌ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap