ಕ್ರೂಸರ್​ ವಾಹನ ಅಪಘಾತ: ಬೆಳಗಾವಿಯ 6 ಮಂದಿ ಸಾವು

ಬೆಳಗಾವಿ

    ಮಧ್ಯಪ್ರದೇಶದ  ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್  ನಗರದ ಆರು ಮಂದಿ ಮೃತಪಟ್ಟಿದ್ದಾರೆ.  ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

   ಉತ್ತರಪ್ರದೇಶದ ವಾರಣಾಸಿ ಬಳಿ ಅಪಘಾತ ಸಂಭವಿಸಿದ್ದ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್​ ಮೂಲದ ಆರು ಮಂದಿ ಮೃತಪಟ್ಟಿದ್ದರು. ಸುನೀತಾ (40 ವರ್ಷ), ನೀಲಮ್ಮ( 62 ವರ್ಷ) ಲಕ್ಷ್ಮಿ (57 ವರ್ಷ) ಕಲಾವತಿ (60 ವರ್ಷ) ಸಂತೋಷ (45 ವರ್ಷ) ಮೃತ ದುರ್ದೈವಿಗಳು. ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದರು. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿತ್ತು.
   ಬೀದರ್​ನ ಲಾಡಗೆರಿ ನಗರ ನಿವಾಸಿಗಳಾದ 14 ಜನ ಫೆಬ್ರವರಿ 18 ರಂದು ಮಧ್ಯಾಹ್ನ ಬೀದರ ನಗರದಿಂದ ಕ್ರೂಸರ್​​ಮಹಾಕುಂಭ ಪ್ರಯಾಗರಾಜಗೆ ಹೊರಟಿದ್ದರು. ಶುಕ್ರವಾರ (ಫೆ.21) ಬೆಳಗಿನ ಜಾವ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದರು.