ರಸ್ತೆ ಅಪಘಾತ; ಕುಂಭಮೇಳಕ್ಕೆ ತೆರಳಿದ್ದ ಆರು ಜನ ಕನ್ನಡಿಗರ ದುರ್ಮರಣ

ಲಖನೌ:

    ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ಮೂಲದ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 6 ಮಂದಿ ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

   ಶುಕ್ರವಾರ ಬೆಳಿಗ್ಗೆ, ಭಕ್ತರಿಂದ ತುಂಬಿದ್ದ ಅತಿ ವೇಗದ ಕ್ರೂಸರ್ ಕಾರು ರೂಪಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ, ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ. ಒಂದೇ ಗಾಡಿಯಲ್ಲಿ ಒಟ್ಟು 12 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು.

   ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಮೂಲದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್(30) ಮೃತ ಯುವಕ. ಕುಟುಂಬಸ್ಥರ ಜೊತೆ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿತಿನ್ ತಾಯಿ ಪುಷ್ಪ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

   ಬೆಳಗ್ಗೆ ಮಂಜು ಮುಸುಕಿದ್ದರಿಂದ ಕಾರಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಂಟೈನರ್ ಸರಿಯಾಗಿ ಕಾಣಿಸದ ಹಿನ್ನಲೆ ಕಾರು ಹಿಂಭಾಗದಿಂದ ಕಂಟೈನರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ನಿತಿನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮಗನ ಹಿಂಬದಿ ಸೀಟ್​ನಲ್ಲಿ ಕುಳಿತಿದ್ದ ತಾಯಿಗೆ ಗಂಭೀರವಾಗಿ ಗಾಯವಾಗಿದೆ. ಇನ್ನು ಚಾಲಕ ಪ್ರಜ್ವಲ್ ಪ್ರಾಣಾಪಾಯದಿಂದ ಪಾರಾಗಿದ್ದು, ಹಿಂಬದಿ ಕುಳಿತಿದ್ದ ಪ್ರಜ್ವಲ್ ತಾಯಿ ಶಕುಂತಲಾ, ಸೋದರಮಾವ ಹರೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ವಾರಾಣಸಿಯ ಬಿ.ಹೆಚ್.ಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ನಿತಿನ್ ಮೃತದೇಹವನ್ನು ಅದೇ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. 

   ಇನ್ನು ಉತ್ತರಪ್ರದೇಶಧ ಘಾಜಿಪುರ ಜಿಲ್ಲೆಯ ಬಿರ್ನೋ ಪೊಲೀಸ್ ಠಾಣೆ ಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದೆ. ವಾರಣಾಸಿ-ಗೋರಖ್‌ಪುರ ಚತುಷ್ಪಥ ಹೆದ್ದಾರಿಯಲ್ಲಿ, ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದ ಭಕ್ತರ ಕಾರು, ಬ್ಯಾಲಸ್ಟ್ ತುಂಬಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Recent Articles

spot_img

Related Stories

Share via
Copy link