ಬೆಂಗಳೂರು:
ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಾಗಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಕರ್ನಾಟಕ ಪ್ರದೇ SM Jagadishಶ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ವಜಾಗೊಳಿಸಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಬೇರೆ ಪಕ್ಷದ ಅಭ್ಯರ್ಥಿಯೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವುದು ಹಾಗೂ ಪಕ್ಷದ ನಾಯಕರ ಬಗ್ಗೆ,ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಕಂಡುಬಂದಿದ್ದು, ಪಕ್ಷ ವಿರೋಧಿ ಚಟುವಟಿಕೆಗೆಗಾಗಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.