ಜನವರಿ : ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ : ಸಿಎಂ

ಬೆಂಗಳೂರು :

     ಜನವರಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ.30ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ.

    ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap