ತುರುವೇಕೆರೆ
ಗಣೇಶಚತುರ್ಥಿಯ ಅಂಗವಾಗಿ ಪಟ್ಟಣದ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ 66 ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.
ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೆಳಗಿನಿಂದಲೇ ಪೂಜಾ ವಿಧಿ ವಿಧಾನಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಪೂಜಾ ವಿಧಿವಿಧಾನಗಳು ನೆರವೇರಿದ ನಂತರ ಸತ್ಯಗಣಪತಿ ದರ್ಶನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು. ಪಟ್ಟಣ ಸೇರಿದಂತೆ ಆಸುಗ್ರಾಮಗಳಿಂದ ಆಗಮಿಸಿದ್ದ ಅನೇಕರು ಸ್ವಾಮಿಯವರ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧನ್ಯತೆ ಮೆರೆದರು.
ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಶ್ರೀ ಸತ್ಯಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ್(ರಾಜು), ಪಟ್ಟಣ ಪಂಚಾಯ್ತಿ ಸದಸ್ಯ ವಿಜಿಕುಮಾರ್, ಕಾರ್ಯದರ್ಶಿ ನರಸಿಂಹಣ್ಣ, ರವಿರಾಜು, ಎನ್.ಆರ್.ಸುರೇಶ್, ನಾಗರಾಜ್, ರಂಗನಾಥ್, ಮಂಜು, ಅರ್ಚಕ ಗುಂಡಣ್ಣ, ಕೀರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
