7ನೇ ವೇತನ ಆಯೋಗ ಜಾರಿ : ಆರ್ಥಿಕ ಪರಿಸ್ಥಿತಿ ಆಧರಿಸಿರುತ್ತದೆ : ಸಿಎಂ

ಬೆಂಗಳೂರು:

    7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ನಿರ್ಧಾರವು ರಾಜ್ಯದ ಆರ್ಥಿಕತೆಯನ್ನು ಅವಲಂಬಿಸಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

    ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸು ಹಾಗೂ ರಾಜ್ಯದ ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು. ನೌಕರರ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

    ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಕುರಿತು ರಚಿಸಿರುವ ಏಳನೇ ವೇತನ ಆಯೋಗ ಅಂತಿಮ ವರದಿ ನೀಡಲು ಆರು ತಿಂಗಳ ಕಾಲಾವಕಾಶ ಕೋರಿದ್ದು, ಅಂತಿಮ ವರದಿ ಪರಿಶೀಲಿಸಿ ರಾಜ್ಯದ ಹಣಕಾಸು ಸ್ಥಿತಿಗತಿ ನೋಡಿಕೊಂಡು ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಈಗಾಗಲೇ ಸರ್ಕಾರಿ ನೌಕರರಿಗೆ ಪೂರ್ವಾನ್ವಯವಾಗುವಂತೆ ಮಧ್ಯಂತರ ಪರಿಹಾರ ಕೊಡಲಾಗಿದೆ. ಈಗ ಅಂತಿಮ ವರದಿ ನೋಡಿ ಅನುಷ್ಠಾನ ಮಾಡಲಿದ್ದೇವೆ ಎಂದು ಹೇಳಿದರು.ಐದು ಗ್ಯಾರಂಟಿ ಕೊಡುತ್ತಿದ್ದೇವೆ, ಇದನ್ನೂ ಕೊಡುತ್ತೇವೆ. ವೇತನ ಆಯೋಗದವರು ಸಮಯ ಪಡೆದಿದ್ದಾರೆ. ಅವರಿಗೆ ಈಗಲೇ ವರದಿ ಕೊಡಿ ಎನ್ನಲಾಗುತ್ತಾ? ವರದಿ ಬರುತ್ತಿದ್ದಂತೆ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link