ಮಹಾರಾಷ್ಟ್ರ :
ಮಹಾರಾಷ್ಟ್ರದ ರಾಯಘಡ ಪ್ರದೇಶದಲ್ಲಿ ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.