ಹರಿಯಾಣ :
ಟ್ರಕ್ವೊಂದು ಮಿನಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಅಂಬಾಲದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ (ಶುಕ್ರವಾರ) ಮೊಹ್ರಾ ಗ್ರಾಮದ ಬಳಿಕ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಉತ್ತರ ಪ್ರದೇಶದಿಂದ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇಗುಲಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಬಸ್ನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ