ಮಂಗಳೂರು,
ಸರ್ಕಾರದ ವರ್ಗಾವಣೇ ಪರ್ವ ಶುರುವಾಗಿದ್ದು ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ರೈಲ್ವೆ ಡಿಐಜಿಯಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಕುಲದೀಪ್ ಅವರು ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಹೊರಡಿಸಿರುವ ನೂತನ ವರ್ಗಾವಣೆ ಆದೇಶದಲ್ಲಿ ಶಶಿಕುಮಾರ್ ಸೇರಿದಂತೆ 7 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
2020ರ ಡಿಸೆಂಬರ್‌ನಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಶಶಿಕುಮಾರ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಿಸಿತ್ತು. ಕರ್ತವ್ಯ ವಹಿಸಿಕೊಂಡ ಬಳಿಕ ಎನ್.ಶಶಿಕುಮಾರ್ ಮಂಗಳೂರಿನಲ್ಲಿ ಸಕ್ರಿಯ ಅಧಿಕಾರಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ