ಬೆಂಗಳೂರು:
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ರಾಜ್ಯದ ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡಕ್ಕೆ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಮತ್ತು ಕೊಡಗು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.
ರಾಜ್ಯದ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉನ್ನತ ಶ್ರೇಣಿಯಲ್ಲಿ 1,09,509 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, ಪ್ರಥಮ ದರ್ಜೆಯಲ್ಲಿ 2,47,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು 90,014 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸ್ ಆಗಿದ್ದರೆ, 77,371 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗ
ಟಾಪರ್ ದ್ವಿತೀಯ ಪಿಯುಸಿ ಫಲಿತಾಂಶದ ಕಲಾ ವಿಭಾಗದಲ್ಲಿ ತಬಸುಮ್ ಶೇಖ್ ಅವರು ಮೊದಲ ರ್‍ಯಾಂಕ್ ಗಳಿಸಿದ್ದಾರೆ. ಬೆಂಗಳೂರಿನ ಎನ್ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್ ಅವರು 600 ಅಂಕಗಳಿಗೆ 593 ಅಂಕಗಳನ್ನು ಗಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿಯೇ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಕಾಲೇಜಿಗೆ ಮತ್ತು ಪೋಷಕರಿಗೆ ಹೆಮ್ಮೆ ತಂದಿದ್ದಾರೆ.
ವಾಣಿಜ್ಯ ವಿಭಾಗ
ಟಾಪರ್ 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ಅವರು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಅನನ್ಯಾ ಅವರು ಒಟ್ಟು ಒಟ್ಟು 600 ಅಂಕಗಳಿಗೆ 600 ಅಂಕಗಳನ್ನು ಪಡೆದು ಅತ್ಯುತ್ತಮ ಶ್ರೇಯಾಂಕಕ್ಕೆ ಭಾಜನರಾಗಿದ್ದಾರೆ.
ವಿಜ್ಞಾನ ವಿಭಾಗ
ಇಬ್ಬರು ಟಾಪರ್ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ವಿಜ್ಞಾನ ವಿಭಾಗದಲ್ಲಿ ಸುರಭಿ ಎಂಬ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಬೆಂಗಳೂರಿನ ಆರ್‌ವಿ ಕಾಲೇಜಿನ ವಿದ್ಯಾರ್ಥಿನಿ ಸುರಭಿ ಅವರು ಒಟ್ಟು 600 ಅಂಕಗಳಿಗೆ 596 ಅಂಕಗಳನ್ನು ಪಡೆದು ಮೊದಲ ರ್‍ಯಾಂಕ್ ಗಳಿಸಿದ್ದಾರೆ.
ಇದೇ ವೇಳೆ ಮತ್ತೊಬ್ಬ ವಿದ್ಯಾರ್ಥಿ ಕೌಶಿಕ್ ಎಂಬುವವರು ಕೂಡ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಕೌಶಿಕ್ 600 ಅಂಕಗಳಿಗೆ 596 ಅಂಕಗಳನ್ನು ಪಡೆದಿದ್ದಾರೆ. 2022-23ನೇ ಸಾಲಿನಲ್ಲಿ ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.80.25 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದರೆ, ಶೇ.69.05ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ತುಮಕೂರಿಗೆ ರಾಜ್ಯ ಫಲಿತಾಂಶ ಪಟ್ಟಿಯಲ್ಲಿ 23ನೇ ಸ್ಥಾನ…!
ತುಮಕೂರಿನ ಕಿರ್ತಿಯನ್ನು ವಿದ್ಯಾರ್ಥಿಗೂ ಎತ್ತಿ ಹಿಡಿದಿದ್ದು ರಾಜ್ಯಕ್ಕೆ 23ನೇ ಸ್ಥಾನ ಪಡೆದಿದೆ ಮತ್ತು ವಿಜ್ಞಾನ ವಿಭಾಗದಲ್ಲಿ ತುಮಕೂರಿನ ರುಚಿತಾ ಅವರು ರಾಜ್ಯಕ್ಕೆ 3ನೇ ಸ್ಥಾನ ಪಡೆದಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ