ಸಿರಿಯಾ: 75 ಭಾರತೀಯರ ರಕ್ಷಣೆ

ನವದೆಹಲಿ:

      ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರನ್ನು ಇಸ್ಲಾಮಿಕ್ ಬಂಡುಕೋರರು ಪದಚ್ಯುತಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

     ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಸಚಿವಾಲಯ ಒತ್ತಿ ಹೇಳಿದೆ.

    ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳೂ ಸೇರಿದ್ದಾರೆ. ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಲೆಬನಾನ್‌ಗೆ ದಾಟಿದ್ದು, ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಭಾರತಕ್ಕೆ ಹಿಂತಿರುಗುತ್ತಾರೆ ಎಂದು ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ

Recent Articles

spot_img

Related Stories

Share via
Copy link