ಬೆಂಗಳೂರು:
75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.
ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.
ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರ’ ಎನ್ನುತ್ತಾ ಕನ್ನಡದಲ್ಲೇ ಭಾಷಣ ಆರಂಭಿಸಿದರು, ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದರು. ಬಳಿಕ ರಾಜ್ಯ ಸರ್ಕಾರದ ಸಾಧನೆಗಳನ್ನು ಕೊಂಡಾಡಿದರು.