ಲೋ ಬಿಪಿ : 7ನೇ ತರಗತಿ ವಿದ್ಯಾರ್ಥಿ ಸಾವು

ನಂಜನಗೂಡು:

   ಹೃದಯ ವೈಫಲ್ಯದಿಂದ  ಸಣ್ಣ ಮಕ್ಕಳು ಸಾಯುತ್ತಿರುವ ಸುದ್ದಿಗಳ ನಡುವೆಯೇ, ಲೋ ಬಿಪಿಯಿಂದಾಗಿ ಬಾಲಕನೊಬ್ಬ ಮೃತಪಟ್ಟ ಘೋರ ಘಟನೆ ನಂಜನಗೂಡಿನಿಂದ  ವರದಿಯಾಗಿದೆ.ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ. ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ.

   ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

Recent Articles

spot_img

Related Stories

Share via
Copy link