7ನೇ ವೇತನ ಆಯೋಗದ ವರದಿ : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಂಗಳೂರು:

    ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ 7ನೇ ವೇತನ ಆಯೋಗದ ಶಿಫಾರಸು ಆಗಸ್ಟ್ 1ರಂದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದ್ದಾರೆ.

   ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸುವ ಮೂಲಕ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗಲಿದೆ.

   ನೌಕರರ ಕನಿಷ್ಟ ಮೂಲವೇತನವು 17 ಸಾವಿರ ರೂಪಾಯಿಯಿಂದ 27 ಸಾವಿರ ರೂಪಾಯಿಗೆ ಹಾಗೂ ಗರಿಷ್ಟ ವೇತನವು 1,50,600 ರೂಪಾಯಿಯಿಂದ 2,41,200 ರೂಪಾಯಿಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8.500 ರೂಪಾಯಿಯಿಂದ 13,500 ರೂಪಾಯಿಗೆ ಮತ್ತು ಗರಿಷ್ಠ ಪಿಂಚಣಿಯು 75,300 ರೂಪಾಯಿಯಿಂದ 1,20,600 ರೂಪಾಯಿಗೆ ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ.

   ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದರು.

Recent Articles

spot_img

Related Stories

Share via
Copy link
Powered by Social Snap