ಬೆಂಗಳೂರು : ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಒಟ್ಟು 8 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದರಲ್ಲಿ ಒಟ್ಟು 8 ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಯಾರು ಎಲ್ಲಿಗೆ ವರ್ಗಾವಣೆ ಆಗಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಜಿಲ್ಲಾಧಿಕಾರಿಗಳ ವರ್ಗಾವಣೆಯ ವಿವರ :
- ಅಮ್ಲನ್ ಆದಿತ್ಯ ಬಿಸ್ವಾಸ್, ಐಎಎಸ್ (ಕೆ.ಎನ್: 1997) ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ವರ್ಗಾಯಿಸಿಸಲಾಗಿದೆ.
- ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ಐಎಎಸ್ (ಕೆ.ಎನ್: 2010) ಅವರನ್ನುಮುಂದಿನ ಆದೇಶದವರೆಗೆ ಸಹಕಾರ ಸಂಘಗಳ ರಿಜಿಸ್ಟ್ರಾರ್ ಮತ್ತು ಬೆಂಗಳೂರಿನ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಲ್ಲಿ ನೇಮಿಸಲಾಗಿದೆ.
- ಸುಂದರೇಶಬಾಬು ಎಂ., ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಗದಗ ಜಿಲ್ಲೆ, ಇವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್,ಗೆ ನೇಮಕ ಮಾಡಲಾಗಿದೆ.
- ಸುರಳ್ಕರ್ ವಿಕಾಸ್ ಕಿಶೋರ್, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆ , ಇವರನ್ನು ಮುಂದಿನ ಆದೇಶದವರೆಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
- ಹೊನ್ನಾಂಬ, ಐಎಎಸ್ (ಕೆ.ಎನ್: 2012), ಕಾರ್ಯದರ್ಶಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಬೆಂಗಳೂರು ಇವರನ್ನು ಜಿಲ್ಲಾಧಿಕಾರಿ, ಗದಗ ಜಿಲ್ಲೆಗೆ ವರ್ಗಾವಣೆ ಮಡಲಾಗಿದೆ.
- ಆರ್.ಲತಾ, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ, ಅವರನ್ನು ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
- ಲೋಖಂಡೆ ಸ್ನೇಹಲ್ ಸುಧಾಕರ್, ಐಎಎಸ್ (ಕೆ.ಎನ್: 2017) ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಉಪ ಕಾರ್ಯದರ್ಶಿಯಾಗಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.
- ಶಿವಾನಂದ ಕಾಪಶಿ, ಐಎಎಸ್ (ಕೆಎನ್: 2012), ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ದಾವಣಗೆರೆ ಜಿಲ್ಲೆ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. ದಾವಣಗೆರೆ ವೈಸ್ ಶ್ರೀ ಮಹಾಂತೇಶ ಬಿಳಗಿ, ಐಎಎಸ್ ವರ್ಗಾವಣೆ ಮಾಡಿದ್ದಾರೆ.
