ಉಡುಪಿ :
ಗಂಗೊಳ್ಳಿಯ ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ಎಂಟು ಮೀನುಗಾರಿಕಾ ದೋಣಿಗಳು ಸೋಮವಾರ ಬೆಳಗಿನ ಜಾವ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಗೆ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ದೀಪಾವಳಿ ಹಬ್ಬದ ಅಂಗವಾಗಿ ಸಿಡಿಸಿದ ಪಟಾಕಿ ಕಿಡಿ ದೋಣಿಯ ಮೇಲೆ ಬಿದ್ದಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಇತರ ಮೂಲಗಳು ತಿಳಿಸಿವೆ.
ಒಂದು ದೋಣಿಯಲ್ಲಿ ಮೊದಲಿಗೆ ಕಾಣಿಸಿಕೊಂಡ ಬೆಂಕಿಯು ಸ್ವಲ್ಪ ಸಮಯದಲ್ಲಿಯೇ ಲಂಗರು ಹಾಕಲಾಗಿದ್ದ ಇತರ ದೋಣಿಗಳಿಗೂ ಹರಡಿತು.ಕುಂದಾಪುರ ಮತ್ತು ಬೈಂದೂರಿನಿಂದ ಆಗಮಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಕರಾವಳಿ ಕಾವಲು ಸಿಬ್ಬಂದಿ ಮತ್ತು ಪೊಲೀಸರು ಸಹ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅಗ್ನಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ