ಕರ್ನಾಟಕದ 8 ಮಂದಿಗೆ ಪದ್ಮ ಪ್ರಶಸ್ತಿಯ ಗರಿ…!

ನವದೆಹಲಿ:

    ಕರ್ನಾಟಕದ ಹಲವು ಗಣ್ಯರು ಮತ್ತು ಸಾಧಕರಿಗೆ ದೇಶದ ಅತ್ಯುನ್ನತ ಗೌರವವಾದ ಪದ್ಮ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ. 

   2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಬಾರಿ ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಬಾರಿ ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

   2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. 91 ವರ್ಷದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಪದ್ಮವಿಭೂಷಣ ಪ್ರಶಸ್ತಿಪ್ರಧಾನ ಮಾಡಲಾಗಿದೆ.

   ಇನ್ನು ಸಾಹಿತಿ ಭೈರಪ್ಪ ಹಾಗೂ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉಳಿದಂತೆ ಕರ್ನಾಟಕದಿಂದ ವಿಜ್ಞಾನಿ ಖಾದರ್‌ವಲ್ಲಿ ದುಡೇಕುಲ, ಉಮ್ಮತ್ತಾಟ್‌ ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್‌ ಅಹಮದ್‌ ಖಾದ್ರಿ, ಎಸ್‌.ಸುಬ್ಬರಾಮನ್‌ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್‌ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap