ಮುಂಬೈ:
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೆಕೆಟ್ ಜಲಗಾಂವ್ ಗ್ರಾಮದ ಶಾಲೆಯಲ್ಲಿ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಶನಿವಾರ ಶಾಲೆಯಲ್ಲಿ ಪೌಷ್ಠಿಕ ಆಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ವಿತರಿಸಲಾಗಿತ್ತು.ಬಿಸ್ಕೆಟ್ ತಿಂದ ನಂತರ ವಿದ್ಯಾರ್ಥಿಗಳಲ್ಲಿ ವಾಕರಿಕೆ ಮತ್ತು ವಾಂತಿಯಾಗಿ, ಕೆಲವೇ ಕ್ಷಣಗಳಲ್ಲಿ ಅಸ್ವಸ್ಥರಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಗ್ರಾಮದ ಮುಖ್ಯಸ್ಥರು ತಕ್ಷಣ ವಾಹನದ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳನ್ನು ನಗರದ ಆಸ್ಪತ್ರೆಗೆ ದಾಖಲಿಸದ್ದಾರೆ. ಮುಂಜಾನೆ ಸುಮಾರು 8:30ಕ್ಕೆ ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಲಾಯಿತು. 257 ವಿದ್ಯಾರ್ಥಿಗಳಲ್ಲಿ ಫುಡ್ ಪಾಯಿಸನ್ ಆಗಿತ್ತು. ಅದರಲ್ಲಿ 153 ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
7 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಶಂಭಾಜಿನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ನಗರದ ವೈದ್ಯಾಧಿಕಾರಿ ಡಾ. ಬಾಬಾಸಾಹೇಬ್ ಘುಘೆ ತಿಳಿಸಿದ್ದಾರೆ. ಶಾಲೆಯಲ್ಲಿ ಒಟ್ಟು 296 ವಿದ್ಯಾರ್ಥಿಗಳಿದ್ದಾರೆ. ಸದ್ಯ ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.