ಚಾರಿಟಿ ಕಾರ್ಯಕ್ರಮ : 85 ಮಂದಿ ಸಾವು…!

ನವದೆಹಲಿ:

     ಯೆಮೆನ್’​ನ ರಾಜಧಾನಿ ಸನಾದಲ್ಲಿ ರಂಜಾನ್ ಪ್ರಯುಕ್ತ ಆಯೋಜಿಸಲಾಗಿದ್ದ ಚಾರಿಟಿ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ 85 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ. 

     ರಂಜಾನ್ ಪ್ರಯುಕ್ತ ಬಂಡುಕೋರರ ಗುಂಪು ರಾಜಧಾನಿಯಲ್ಲಿ ಹಣಕಾಸಿನ ನೆರವು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದನ್ನರಿತ ಜನರು ಸಾಗರೋಪಾದಿಯಲ್ಲಿ ಸ್ಥಳದಲ್ಲಿ ನೆರೆದಿದ್ದರು. ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಜನರು ಸೇರಿದ್ದರಿಂದ ಜನರನ್ನು ನಿಯಂತ್ರಿಸುವಲ್ಲಿ ಆಯೋಜಕರು ವಿಫಲರಾಗಿದ್ದಾರೆ.

     ಈ ವೇಳೆ ಜನರ ತಿಕ್ಕಾಟ ಹೆಚ್ಚಾಗಿ ನೆರವು ಪಡೆಯಲು ನಾ ಮುಂದು ತಾಮುಂದು ಎಂದು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ 85 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 
     ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡದೇ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.ಕಾಲ್ತುಳಿತಲ್ಲಿ ಗಾಯಗೊಂಡ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

 

   ದುರಂತದ ಬಳಿಕ ಕಾರ್ಯಕ್ರಮ ಆಯೋಜಿಸಿದ್ದ ಶಾಲೆಯನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದು ಕೊಂಡಿದ್ದು, ಇದೀಗ ಸ್ಥಳಧಲ್ಲಿ ಪತ್ರಕರ್ತರು ಸೇರಿದಂತೆ ಜನರ ಪ್ರವೇಶವನ್ನು ನಿರಾಕರಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಹೌತಿಗಳ ಗುಂಪಿನ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap