ಝಬುವಾ
ಸಿಮೆಂಟ್ ತುಂಬಿದ್ದ ಟ್ರಕ್ ವ್ಯಾನ್ ಮೇಲೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಝಬುವಾದಲ್ಲಿ ನಡೆದಿದೆ. ಒಂದೇ ಕುಟುಂಬದ 9 ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ನ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ಬೆಳಗಿನ ಜಾವ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ತಾತ್ಕಾಲಿಕ ರಸ್ತೆ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ಸಮತೋಲನ ಕಳೆದುಕೊಂಡು ಬಿದ್ದಿದೆ. ಮೇಘನಗರ ಬಳಿ ಟ್ರಕ್ ಪಲ್ಟಿಯಾಗಿ ಅವರ ವಾಹನದ ಮೇಲೆ ಬಿದ್ದಿದೆ. ಅಧಿಕಾರಿಗಳ ಪ್ರಕಾರ, ಅಪಘಾತ ಸಂಭವಿಸಿದಾಗ ಅವರು ಮದುವೆ ಸಮಾರಂಭದಿಂದ ಮನೆಗೆ ಹಿಂತಿರುಗುತ್ತಿದ್ದರು.ಒಂಬತ್ತು ಮಂದಿ ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದರು, ಅದು ಟ್ರಕ್ನ ಭಾರಕ್ಕೆ ನಜ್ಜುಗುಜ್ಜಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
