ಬೀಜಿಂಗ್:
ಪೂರ್ವ ಚೀನಾದ ಹಿಮಾವೃತ ಎಕ್ಸ್ ಪ್ರೆಸ್ ವೇ ನಲ್ಲಿ ಸುಮಾರು ನೂರಾರು ಕಾರುಗಳ ನಡುವೆ ಶುಕ್ರವಾರ ಅಪಘಾತ ಸಂಭವಿಸಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದಿಂದ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮವೊಂದು ವರದಿ ಮಾಡಿದೆ. ಅಪಘಾತದ ಚಿತ್ರಣದ ಫೋಟೋಗಳನ್ನು ಹಂಚಿಕೊಂಡಿದೆ.
ಅಧಿಕೃತ ಸುದ್ದಿ ವಾಹಿನಿ ಹಂಚಿಕೊಂಡಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪ್ರಯಾಣಿಕರ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಕಿಕ್ಕಿರಿದು ನಿಂತಿರುವುದನ್ನು ನೋಡಬಹುದಾಗಿದೆ. ಇದರಿಂದಾಗಿ ಎಕ್ಸ್ ಪ್ರೆಸ್ ವೇ ನಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು.
ಅಪಘಾತದ ಪರಿಣಾಮ ಯಾವುದೇ ಸಾವು- ನೋವುಗಳು ದಾಖಲಾಗಿಲ್ಲವಾದರೂ ಮೂವರನ್ನು ಗಾಯಗಳಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತಿತರ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯ ಸಂಚಾರಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.
“ಇತ್ತೀಚಿನ ಮಳೆಯ ವಾತಾವರಣದಿಂದ ರಸ್ತೆಗಳು ಹದಗೆಟ್ಟಿದ್ದು, ಚಾಲಕರು ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.