ಬೆಳಗಾವಿ:
ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಪ್ರಸಾದ ಸೇವನೆ ಮಾಡಿ 80ಕ್ಕೂಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಬುಧವಾರದಂದು ನಡೆದ ಗ್ರಾಮ ಜಾತ್ರೆಯಲ್ಲಿ ಪ್ರಸಾದ ರೂಪದಲ್ಲಿ ಸಾವಿರಕ್ಕೂ ಹೆಚ್ಚು ಗ್ರಾಮಸ್ಥರು ಊಟ ಮಾಡಿದ್ದಾರೆ. ಉಳಿದ ಅಡುಗೆಯನ್ನು ರಾತ್ರಿ ಹೊತ್ತಿಗೆ ನೂರಕ್ಕೂ ಹೆಚ್ಚು ಜನರು ಸೇವನೆ ಮಾಡಿದ್ದು, ಈ ಹಲವರಿಗೆ ಗೆ ಫುಡ್ ಪಾಯಿಸನ್ ಆಗಿ 20ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಬೇದಿ ಕಾಣಿಸಿಕೊಂಡಿದೆ.
ಆರೋಗ್ಯದಲ್ಲಿ ಏರುಪೇರಾದಾಗ ಗ್ರಾಮಸ್ಥರು ಚಿಕ್ಕೋಡಿ ಹಾಗೂ ಯಕ್ಸಂಬಾ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸುಮಾರು 80 ಮಂದಿ ಭಕ್ತರಲ್ಲಿ 60 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 20 ಮಂದಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ,
ಈ ನಡುವೆ ಆರೋಗ್ಯ ಇಲಾಖೆಯ ತಂಡ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆದಿದೆ. ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಮಾತನಾಡಿ, ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಲಾಗಿದೆ. ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದು, ವೈದ್ಯಕೀಯ ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.
ಎಲ್ಲಾ ಭಕ್ತರ ಆರೋಗ್ಯದ ಮೇಲೆ ನಿಗಾ ಇಡಲು ವೈದ್ಯಕೀಯ ತಂಡವೊಂದು ಕೆರೂರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮೂವರು ಹಿರಿಯ ವೈದ್ಯರ ನೇತೃತ್ವದಲ್ಲಿ ವೈದ್ಯಕೀಯ ತಂಡವಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ