ಬೆಂಗಳೂರು
ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಖಾಲಿಯಿರುವ 16 ಸಾವಿರದ 838 ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.ಇದಲ್ಲದೇ ರಾಜ್ಯದ ಜನಸಂಖ್ಯೆಗನುಗುಣವಾಗಿ ಎಷ್ಟು ಸಂಖ್ಯೆಯ ಪೊಲೀಸರ ಅಗತ್ಯವಿದೆ ಎನ್ನುವ ವರದಿ ಸಿದ್ಧಪಡಿಸಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಈ ಅರ್ಜಿ ವಿಚಾರಣೆ ನಡೆಸಿದ ವೇಳೆ ಇಂತಹ ಸೂಚನೆ ಹಾಗೂ ನೇಮಕಾತಿ ಆದೇಶವನ್ನೂ ಸಹ ನೀಡಿದೆ.ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಹಾಗೂ ನ್ಯಾಯಮೂರ್ತಿ ಹೆಚ್.ಪಿ ನರೇಂದ್ರಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಸರ್ಕಾರಕ್ಕೆ ಈ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








