ಆಟವಾಡುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ..!!

ಬೆಂಗಳೂರು

  ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿಯನ್ನ ಎಳೆದೊಯ್ದು ಕಾಮುಕನೊಬ್ಬ ಅತ್ಯಾಚಾರ ಎಸಗಿದ ಕಾಮುಕನನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.ಸಾತನೂರಿನ ಶಿಹಿರಾ(50)ಬಂಧಿತ ಆರೋಪಿಯಾಗಿದ್ದಾನೆ,ಮನೆಯ ಮುಂಭಾಗ ಮಂಗಳವಾರ ಮಧ್ಯಾಹ್ನ ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಆರೋಪಿಯು ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕಣ್ಣೀರು ಹಾಕುತ್ತಾ ಮನೆಗೆ ಬಂದ ಬಾಲಕಿ ಪೋಷಕರಿಗೆ ಘಟನೆಯ ಬಗ್ಗೆ ಹೇಳಿಕೊಂಡಿದ್ದಾಳೆ. ತಕ್ಷಣವೇ ಪೋಷಕರು ಸಾತನೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

    ತಕ್ಷಣವೇ ಕಾರ್ಯಾಚರಣೆ ಕೈಗೊಂಡ ಸಾತನೂರು ಪೊಲೀಸರು ಕೃತ್ಯವೆಸಗಿ ಪರಾರಿಯಾಗಿರುವ ಆರೋಪಿ ಶಿಹಿರಾನನ್ನು ಬಂಧಿಸಿ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.ಸಂತ್ರಸ್ತೆಯ ಪೋಷಕರು, ಗ್ರಾಮಸ್ಥರು ಶಿಹಿರಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link