ಬೆಂಗಳೂರು
ನಗರದ 4 ಸಾವಿರಕ್ಕೂ ಹೆಚ್ಚು ಮಾಂಸದ ಅಂಗಡಿಗಳಿಂದ ಪ್ರತಿನಿತ್ಯ 40 ಟನ್ ಪ್ರಾಣಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ 80 ರಿಂದ 90 ಟನ್ ಮಾಂಸದ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು ಅದರ ವಿಲೇವಾರಿಗೆ 8 ವಲಯಗಳಲ್ಲಿ ಪ್ರತ್ಯೇಕ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಅವರು ತಿಳಿಸಿದ್ದಾರೆ.
ನಗರದಲ್ಲಿ ಕಸದ ಸಮಸ್ಯೆ ಕುರಿತಂತೆ ನಡೆದ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಪ್ರಾಣಿತ್ಯಾಜ್ಯ ವಿಲೇವಾರಿಗೆ 8 ವಲಯಗಳಲ್ಲಿ ಪ್ರತ್ಯೇಕ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ. ಗುತ್ತಿಗೆದಾರರೇ ಸಂಸ್ಕರಣಾ ಘಟಕಗಳನ್ನು ಹೊಂದಿರಬೇಕು ಎಂದರು.
ನಗರದಲ್ಲಿ ಉಲ್ಬಣಿಸುತ್ತಿರುವ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಮೆಟಗಾನಹಳ್ಳಿ ಕ್ವಾರಿಗೆ ತ್ಯಾಜ್ಯ ವಿಲೇವಾರಿ ಮಾಡುವಂತೆ ಘನತ್ಯಾಜ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿ ಈಗಾಗಲೇ ಬೆಳ್ಳಳ್ಳಿ ಕ್ವಾರಿ ಭರ್ತಿಯಾಗಿದೆ. ಹಾಗಾಗಿ ತ್ಯಾಜ್ಯವನ್ನು ಅಲ್ಲಿಗೆ ಕೊಂಡೊಯ್ಯಲು ಸಾಧ್ಯವಿಲ್ಲ. ಮೆಟಗಾನಹಳ್ಳಿ ಕ್ವಾರಿಗೆ ವಿಲೇವಾರಿ ಮಾಡಬೇಕು ಎಂದರುನಗರದಲ್ಲಿ ಕಳೆದ ಮೂರು ದಿನಗಳಿಂದ ಕಸದ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಇದರಿಂದ ಎಲ್ಲಾ ಕಡೆ ಕಸದ ರಾಶಿ ಬಿದ್ದಿದೆ. ಸಾರ್ವಜನಿಕರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.
ಕಟ್ಟಡ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿಯಲಾಗುತ್ತಿದೆ. ಇದರಿಂದಾಗಿ ನಾಗರಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಕೂಡಲೇ ಈಗಾಗಲೇ ಕಣ್ಣೂರಿನಲ್ಲಿ ಗುರುತಿಸಿರುವ ಸ್ಥಳಕ್ಕೆ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ತಿಳಿಸಿದರು.ಸಭೆಯಲ್ಲಿ ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್, ಮಾಜಿ ಮೇಯರ್ ಮಂಜುನಾಥ ರೆಡ್ಡಿ, ಕಟ್ಟೆ ಸತ್ಯನಾರಾಯಣ, ಪದ್ಮಾವತಿ, ಆಡಳಿತ ಪಕ್ಷದ ಮಾಜಿ ನಾಯಕ ಸತ್ಯನಾರಾಯಣ, ಜೆಡಿಎಸ್ ಗುಂಪಿನ ನಾಯಕಿ ನೇತ್ರಾ ನಾರಾಯಣ್, ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








