ಪ್ರವಾಹ : ಕೇಂದ್ರದಿಂದ ಪರಿಹಾರದ ಭರವಸೆ ನೀಡಿದ ಸಿಎಂ!!

ಬಳ್ಳಾರಿ: 

      ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದು, ಪರಿಹಾರ ಕೋರಿ ಕೇಂದ್ರಕ್ಕೆ ಮನವಿ ಭರವಸೆಯನ್ನು ನೀಡಿದ್ದಾರೆ.

      ಸೋಮವಾರ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸುವ ಪೂರ್ವ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ನೆರೆ ನಿರಾಶ್ರಿತರಿಗೆ ತಕ್ಷಣ ಅಗತ್ಯ ಪರಿಹಾರ ನೀಡಲಾಗುವುದು. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಇದುವರೆಗೆ ನೆರೆಯಿಂದ ಯಾವುದೇ ರೀತಿಯ ಅನಾಹುತಗಳಾಗಿಲ್ಲ. ಅನಾಹುತಗಳನ್ನು ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮತ್ತು ಪರಿಹಾರ ತಂಡಗಳು ಮತ್ತು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ರಾಜ್ಯದಲ್ಲಿ ಒಂದೆಡೆ ನೆರೆ ಮತ್ತೊಂದೆಡೆ ಬರಗಾಲ‌ ಆವರಿಸಿ ವಿಪರ್ಯಾಸದ ಸನ್ನಿವೇಶ ಏರ್ಪಟ್ಟಿದೆ. ಬಳ್ಳಾರಿ ಭಾಗದಲ್ಲಿ ಮತ್ತು ಮಲೆನಾಡಿನ ಶಿವಮೊಗ್ಗದ ಭಾಗದಲ್ಲಿ ಮಳೆ ಇಲ್ಲವಾಗಿದೆ. ಮತ್ತೊಂದೆಡೆ ನೆರೆಹಾವಳಿ ಉಂಟಾಗಿದೆ. ಈ ಎರಡು ಸನ್ನಿವೇಶಗಳನ್ನು ನಿರ್ವಹಿಸಲು ಸರಕಾರ ಬದ್ದವಾಗಿದೆ ಎಂದರು. 

      ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸೋಮವಾರ ಸಂಜೆ ದೆಹಲಿಗೆ ಹೋಗುವುದಾಗಿ ತಿಳಿಸಿದ ಅವರು, 2 ದಿನ ದೆಹಲಿಯಲ್ಲಿ ಇದ್ದು ಹೆಚ್ಚಿನ ಪರಿಹಾರ ಕೋರಿ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಕೇಂದ್ರ ಸಚಿವರ ಭೇಟಿ ಮಾಡಿ ರಾಜ್ಯದ ಪ್ರವಾಹ ಸ್ಥಿತಿ ಮನವರಿಕೆ ಮಾಡುತ್ತೇನೆ. ಪ್ರವಾಹದಿಂದ ಬೆಳೆಗಳಲ್ಲಿ ನೀರು ನಿಂತುಕೊಂಡಿದ್ದು ಬೆಳೆ ಹಾನಿಯಾದರೆ ಪರಿಹಾರ ಕೊಡುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

      ಬಳ್ಳಾರಿಯಿಂದ ಹೆಲಿಕ್ಯಾಪ್ಟರ್ ನಲ್ಲಿ ರಾಯಚೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜುರಾಲಾ ಅಣೆಕಟ್ಟೆಯ ಹಿನ್ನೀರಿನಿಂದ ನಡುಗಡ್ಡೆ ಗ್ರಾಮಗಳಾದ ಕುರ್ವಕುಲ, ಕುರ್ವಕುರ್ದಾ ಗ್ರಾಮದ ಬಳಿ ಕೃಷ್ಣಾ ನದಿ ಪ್ರವಾಹ ವೀಕ್ಷಿಸಿ ವೈಮಾನಿಕ ಸಮೀಕ್ಷೆ ನಡೆಸಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link