ಬೆಂಗಳೂರು
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಲೋಕಸಭೆಯನ್ನು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಹಲವಾರು ದಿನಾಂಕಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿದ್ದರೂ ಕಟೀಲ್ ಅವರು ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿರುವುದರಿಂದ ನ್ಯಾಯಾಧೀಶ ರಾಮ ಚನ್ನಪ್ಪ ಡಿ ಹುದ್ದಾರ್ ಅವರು ಜಾಮೀನು ರಹಿತ ವಾರೆಂಟ್ ಹೊರಡಿಸಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
