ದೆಹಲಿ:
ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳವಾರ ರಾತ್ರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ಕಾನೂನು ಸಚಿವ ರವಿಶಂಕರ್ ಪ್ರಸಾದ್, ಆರೋಗ್ಯ ಸಚಿವ ಹರ್ಷವರ್ಧನ್, ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್, ಎಚ್‌ಆರ್‌ಡಿ ಖಾತೆ ಸಚಿವ ರಮೇಶ್ ಪೊಕ್ರಿಯಾಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಅನೇಕ ಗಣ್ಯರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಬಳಿಕ ಮೃತದೇಹವನ್ನು ಸುಷ್ಮಾ ಅವರ ದೆಹಲಿಯ ನಿವಾಸಕ್ಕೆ ಕೊಂಡೊಯ್ಯಲಾಯಿತು.
Union Ministers Nitin Gadkari, Piyush Goyal, & Prahalad Singh Patel have also reached AIIMS, Delhi where Former External Affairs Minister, Sushma Swaraj, passed away. https://t.co/0QC5cYgBol
— ANI (@ANI) August 6, 2019
ಸುಷ್ಮಾ ಸ್ವರಾಜ್ ಅವರು ಕಳೆದ ಮೋದಿ ಅವರ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ಸಚಿವೆಯಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದರು.ಈ ಬಾರಿ ಆರೋಗ್ಯ ಸಮಸ್ಯೆಯಿಂದಲೇ ಚುನಾವಣೆಯಿಂದ ಹಿಂದೆ ಸರಿದು, ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.
ಅವರು ಕೇವಲ 3 ಗಂಟೆ ಹಿಂದೆಯಷ್ಟೆ, ಜಮ್ಮು ಕಾಶ್ಮೀರದ ವಿಷಯವಾಗಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದರು.
12 ಗಂಟೆ ನಂತರ ಸುಷ್ಮಾ ಸ್ವರಾಜ್ ಅವರ ಮೃತದೇಹವನ್ನು ಮೆರವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಕೇಂದ್ರ ಕಚೇರಿಗೆ ತೆಗೆದುಕೊಂಡು ಬಂದು ಅಲ್ಲಿ ಕಾರ್ಯಕರ್ತರ ದರ್ಶನಕ್ಕೆ ಇಡಲಾಗುತ್ತದೆ.
ನಂತರ ಮೂರು ಗಂಟೆ ವೇಳೆಗೆ ಲೋಧಿ ರಸ್ತೆಯ ರುದ್ರ ಭೂಮಿಯಲ್ಲಿ ಅಂತಿ ವಿಧಿವಿಧಾನ ನಡೆಯಲಿದ್ದು , ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮಕಾರ್ಯ ಮಾಡಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ