ದೆಹಲಿ:
ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ರವರ ನಿವಾಸಕ್ಕೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ನರೇಂದ್ರ ಮೋದಿ, ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುವ ವೇಳೆ ಪ್ರಧಾನಿ ಭಾವುಕರಾಗಿ ಗದ್ಗದಿತರಾದರು.
Delhi: Prime Minister Narendra Modi pays last respects to former External Affairs Minister and BJP leader #SushmaSwaraj. pic.twitter.com/wlvu0mlmon
— ANI (@ANI) August 7, 2019
ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದ ಮೋದಿ ಕಣ್ಣಲ್ಲಿ ನೀರು ಜಿನುಗಿತ್ತು. ನಂತರ ಸುಷ್ಮಾ ಮಗಳಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಮಾತುಗಳನ್ನಾಡಿದರು. ಬಳಿಕ ಅವರ ಪತಿ ಸ್ವರಾಜ್ ಕೌಶಲ್ ಬಳಿ ತೆರಳಿ ಸಾಂತ್ವನ ಹೇಳುತ್ತ ಕಣ್ಣೀರಾದರು. ಹಾಗೇ ಪಾರ್ಥಿವ ಶರೀರದ ಎದುರು ಮೌನವಾಗಿ ನಿಂತುಬಿಟ್ಟರು.
ಕಳೆದ ರಾತ್ರಿ ಸುಮಾರು 9 ಗಂಟೆ ಹೊತ್ತಿಗೆ ನಿಧನರಾದ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಜನಪತ್ ರಸ್ತೆಯಲ್ಲಿರುವ ದವನ್ ದೀಪ್ ಬಿಲ್ಡಿಂಗ್ ನಲ್ಲಿ ಇಡಲಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಲೋಧಿ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ