ಪ್ರವಾಹ ಪರಿಸ್ಥಿತಿ ಕುರಿತು ಉಭಯ ರಾಜ್ಯಗಳ ಮಧ್ಯ ಸಮಾಲೋಚನೆ : ಸಚಿವ ಸುರೇಶ ಅಂಗಡಿ

ನವದೆಹಲಿ:

   ಅತೀವೃಷ್ಟಿ ಹಾಗೂ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ನೀರಿನಿಂದಾಗಿ ರಾಜ್ಯದಲ್ಲಿ ಉಂಟಾಗಿರವು ಪ್ರವಾಹ ಪರಿಸ್ಥಿತಿಯ ಉಲ್ಭಣದ ಬಗ್ಗೆ ಪರಸ್ಪರ ದೋಷಾರೋಪಣೆಯ ರಾಜಕೀಯಕ್ಕೆ ಇಳಿಯದೇ ಪರಿಸ್ಥಿತಿ ಕಾರಣದ ಬಗ್ಗೆ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯ ನೀರಾವರಿ ಇಲಾಖೆಗಳ ಮಧ್ಯ ಪರಸ್ಪರ ಸಮಾಲೋಚನೆ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

   ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ದೂರವಾಣಿಯಲ್ಲಿ ನಿನ್ನೆ ಸಂಪರ್ಕಸಿ ಪರಸ್ಪರ ಮಾತನಾಡಿದ್ದಾರೆ. ಕರ್ನಾಟಕದಲ್ಲಿನ ಪ್ರವಾಹದ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮನವರಿಕೆ ಮಾಡಿದ್ದಾರೆ. ಪರಸ್ಪರ ಸಮಾಲೋಚನೆ ಮೂಲಕ ಸಮಸ್ಯೆಯ ಬಗ್ಗೆ ಕಾರಣ ತಿಳಿದುಕೊಳ್ಳೊಣ ಎಂದು ಯಡಿಯೂರಪ್ಪನವರು ತಿಳಿಸಿದ್ದಾರೆ. ಎರಡೂ ರಾಜ್ಯಗಳ ನೀರಾವರಿ ಇಲಾಖೆಯ ಅಧಿಕಾರಿಗಳು ಚರ್ಚಿಸಿ, ಈ ಬಗ್ಗೆ ವರದಿ ತರಿಸಿಕೊಂಡು ಮುಂದಿನ ಕ್ರಮ ತಗೆದುಕೊಳ್ಳವ ಬಗ್ಗೆ ರಾಜ್ಯದ ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ ಎಂದು ಹೇಳಿದರು.

   ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ನೆರಹಾವಳಿಯಿಂದ ಸಾಕಷ್ಟು ಹಾನಿಯಾಗಿದೆ. ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದರ ಬಗ್ಗೆ ಪರಿಶೀಲನೆಯ ನಂತರ ಕೇಂದ್ರ ಸರ್ಕಾರದ ಹಣಕಾಸಿನ ನೆರವು ಕೇಳಲಾಗುವುದು. ಈಗಾಲೇ ಐದು ಸಾವಿರ ಕೋಟಿ ನೇರುವು ಕೋರಲಾಗಿದೆ ಎಂದು ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

   ಮಳೆ ಹಾಗೂ ಪ್ರವಾಹದಿಂದಾಗಿ ರೈಲು ಸಂಚಾರಕ್ಕೆ ಅಡಚಣೆಯುಂಟಾಗಿದೆ ಅಲ್ಲಿ ಸುಧಾರಣೆಯ ಕಾರ್ಯದಲ್ಲಿ ರೈಲ್ವೆ ಇಲಾಖೆಯ ಅಧಿಕಾರಿಗಳು ಕಾರ್ಯನಿರತರಾಗಿದ್ದಾರೆ. ರಾಜ್ಯದಲ್ಲಿ ರಸ್ತ ಸಂಚಾರ ಅನೇಕಕಡೆ ಸ್ಥಗೀತಗೊಂಡಿರು ವುದರಿಂದ ಅಗತ್ಯವಿದ್ದಲ್ಲಿ ತುರ್ತಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಸೂಚಿಸಲಾಗಿದೆ. ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

   ರಾಜ್ಯದಲ್ಲಿ ರೈಲ್ವೆ ಇಲಾಖೆಯ ಸಮಸ್ಯೆಗಳ ಪರಿಶೀಲನೆ ಹಾಗೂ ಸಾರ್ವಜನಿಕ ಸ್ಪಂದನೆಗೆ ಅನುಕೂಲತೆಯ ದೃಷ್ಟಿಯಿಂದ ಬೆಳಗಾವಿಯಲ್ಲಿ ರೈಲ್ವೆ ಇಲಾಖೆಯ ಕಚೇರಿಯೊಂದನ್ನು ಇಂದು ಬೆಳಗಾವಿಯ ಕಾಡಾ ಕಚೇರಿಯಲ್ಲಿ ಆರಂಭಿಸಲಾಗಿದೆ. ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಯೊರ್ವರನ್ನು ನೇಮಕ ಮಾಡಲಾಗಿದೆ. ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನೇರವಾಗಿ ಈ ಇಲಾಖೆಗೆ ತಿಳಿಸಿ ಉಪಯೋಗಪಡೆದುಕೊಳ್ಳಬಹುದು ಎಂದು ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link