ಬೆಂಗಳೂರು:
ರಾಜ್ಯದಲ್ಲಿ ಹದಿನಾರು ಜಿಲ್ಲೆಗಳ 80 ತಾಲೂಕುಗಳು ಪ್ರವಾಹಪೀಡಿತವಾಗಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತಿದ್ದ ಅವರು, ರಾಜ್ಯದ 16 ಜಿಲ್ಲೆಯ 80 ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ, ಅಪಾರ ಸಂಖ್ಯೆಯ ಜನ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆದರೆ, ಇವರು ಧೈರ್ಯಗುಂದುವ ಅಗತ್ಯವಿಲ್ಲ. ಮುಖ್ಯಮಂತ್ರಿ ಹರಿಹಾರ ನಿಧಿಗೆ ಅಪಾರ ಪ್ರಮಾಣದ ದೇಣಿಗೆ ಹರಿದುಬರುತ್ತಿದ್ದು, ಎಷ್ಟೇ ಖರ್ಚಾದರೂ ಎಲ್ಲರಿಗೂ ರಾಜ್ಯ ಸರ್ಕಾರ ಪುನರ್ವಸತಿ ಕಲ್ಪಿಸಿಕೊಡಲಿದೆ ಎಂದು ಮುಖ್ಯಮಂತ್ರಿ
ಪ್ರವಾಹದಿಂದ ಒಟ್ಟು 6 ಸಾವಿರ ಕೋಟಿ ರೂ. ನಷ್ಟ ಉಂಟಾಗಿದ್ದು, 12,651 ಮನೆಗಳು ಸಂಪೂರ್ಣ ಹಾನಿಯಾಗಿದೆ. 3,22,448 ಎಕ್ಟೇರ್ ಕೃಷಿ ಪ್ರದೇಶದಲ್ಲಿ ಬೆಳೆ ಹಾನಿ, ಆಸ್ತಿ ಪಾಸ್ತಿ ನಷ್ಟ ಸಂಭವಿಸಿದೆ. ಕಳೆದ 45 ವರ್ಷಗಳಲ್ಲಿ ಇದೇ ಮೊದಲ ಬಾರಿ ರಾಜ್ಯದಲ್ಲಿ ಇಂತಹ ದುರಂತ ಸಂಭವಿಸಿದೆ. ಸಂಕಷ್ಟಕ್ಕೆ ಸಿಲುಕಿರುವ 2.35 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ 624 ಪರಿಹಾರ ಕೇಂದ್ರ ಗಳ ತೆರೆಯಲಾಗಿದೆ. ಅಲ್ಲಿ1.57 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.
ದೆಹಲಿಯ ಕಾರ್ಯಕ್ರಮ ಮೊಟಕು ಗೊಳಿಸಿ ಉತ್ತರ ಕರ್ನಾಟಕ ಭಾಗ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದ ಯಡಿಯೂರಪ್ಪ ಕೇಂದ್ರ ಸರಕಾರ ಸೇನೆಯ ನೆರವು ನೀಡಿದೆ. ವಾಯುಪಡೆಯ 4 ಹೆಲಿಕಾಫ್ಟರ್, ಎನ್ ಡಿ ಆರ್ ಎಫ್ ನ 20 ತಂಡಗಳು, ಸೇನೆಯ 5 ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ. ಪ್ರವಾಹವನ್ನು ನಿಭಾಯಿಸಲು ಈಗಾಗಲೇ ಕೇಂದ್ರ ಸರ್ಕಾರ 100 ಕೋಟಿ ಹಣವನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಇನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇನ್ಫೋಸಿಸ್ ವತಿಯಿಂದ 10 ಕೋಟಿ ರೂ., ಹಾಲು ಉತ್ಪಾದಕರ ಒಕ್ಕೂಟ 1 ಕೋಟಿ, ಸರಕಾರಿ ನೌಕರರು 1.5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಶಾಸಕರ ಅಭಿವೃದ್ಧಿ ನಿಧಿಯಿಂದ 2 ಕೋಟಿ ಕೊಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
