ಬೆಳಗಾವಿ :
ಪ್ರವಾಹದಿಂದಾಗಿ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪ್ರವಾಹ ಪರಿಸ್ಥಿತಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಅಮಿತ್ ಶಾ ಇಂದು ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಳೆ ಮತ್ತು ಕೃಷ್ಣಾ ನದಿಯಿಂದ ಅಪಾರ ಪ್ರಮಾಣದಲ್ಲಿ ನೀರನ್ನು ಬಿಟ್ಟಿರುವ ಕಾರಣ ಎರಡೂ ಜಿಲ್ಲೆಗಳ ಹಲವು ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ.
ಬೆಳಗಾವಿಯ ಸಾಂಬ್ರ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಬಳಿಕ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಮಿತ್ ಶಾ ಜೊತೆ ಪಾಲ್ಗೊಳ್ಳಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ