ರಾಷ್ಟ್ರದೆಲ್ಲಡೆ ಬಕ್ರೀದ್​ ಆಚರಣೆ ; ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಯಿಂದ ಶುಭಾಶಯ

ನವದೆಹಲಿ: 

    ಇಂದು ಇಡೀ ರಾಷ್ಟ್ರವೇ ಬಕ್ರೀದ್ ಹಬ್ಬವನ್ನು ಆಚರಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ. 

  ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೊವಿಂದ್ ಅವರು, “ಭಾರತ ಮತ್ತು ವಿದೇಶದಲ್ಲಿರುವ ನಮ್ಮ ಎಲ್ಲಾ ಮುಸ್ಲಿಂ ಸಹೋದರ, ಸಹೋದರಿಯರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬ ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯತೆಯನ್ನು ಸಂಕೇತಿಸುತ್ತದೆ. ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗೋಣ” ಎಂದು ತಿಳಿಸಿದ್ದಾರೆ

ಮೋದಿ ಸೋಮವಾರ ಬೆಳಗ್ಗೆ ಟ್ವೀಟ್​ ಮಾಡಿದ್ದು, ತ್ಯಾಗ, ಬಲಿದಾನದ ಸಂಕೇತವಾದ ಈದ್​-ಅಲ್​-ಅಧಾದ ಸಂದರ್ಭದಲ್ಲಿ ನಾನು ಮುಸ್ಲಿಮರಿಗೆ ಶುಭ ಕೋರುತ್ತೇನೆ. ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ನಾನು ಭಾವಿಸುತ್ತೇನೆ, ಈದ್​ ಮುಬಾರಕ್​ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link