ಬೆಂಗಳೂರು:
ಕಾಂಗ್ರೆಸ್ ಕಾರ್ಯಕರ್ತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕ ನ್ಯೂಟೌನ್ ಬಿ ಸೆಕ್ಟರ್ನಲ್ಲಿ ನಡೆದಿದೆ.
ವೀರಣ ಗೌಡ(50) ಆತ್ಮಹತ್ಯೆ ಮಾಡಿಕೊಂಡ ಮುಖಂಡ. ವೀರಣ್ಣ ಗೌಡ ಅವರು ಮೂಲತಃ ಹೆಸರುಘಟ್ಟ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 7:30ರ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ವೀರಣ ಗೌಡ, ರಿಯಲ್ ಎಸ್ಟೇಟ್ ಉದ್ಯಮಿಯೂ ಆಗಿದ್ದರು. ವೀರಣ್ಣ ಅವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.
ಈ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ