ನವದೆಹಲಿ :
ದೇಶದಲ್ಲಿ ಮೂರು ಸೈನ್ಯಗಳ ಸಮನ್ವಯತೆ ಸಾಧಿಸುವ ಉದ್ದೇಶಕ್ಕಾಗಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ(ಸಿಡಿಎಸ್) ನೇಮಕ ಮಾಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಘೋಷಿಸಿದ್ದಾರೆ.
ಇಂದು ಇಡೀ ದೇಶ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಭಾರತದ 73ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸತತ ಆರನೇ ಬಾರಿಗೆ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.
Delhi: Prime Minister Narendra Modi unfurls the tricolour at Red Fort. #IndiaIndependenceDay pic.twitter.com/FOzli5INJi
— ANI (@ANI) August 15, 2019
ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಚೀಫ್ ಆಪ್ ಡಿಫೆನ್ಸ್ ಸ್ಟಾಫ್(ಸಿಡಿಎಸ್) ಹುದ್ದೆ ಸೃಷ್ಠಿಸಲಾಗುವುದು. ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯ ಮುಖ್ಯಸ್ಥರ ಮೇಲೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಕಾರ್ಯ ನಿರ್ವಹಿಸಲಿದ್ದಾರೆ. ಇವರು ಮೂರೂ ಸೇನಾ ಪಡೆಗಳ ನಡುವೆ ಸಮನ್ವಯ ಸಾಧಿಸಲು, ರಕ್ಷಣಾ ಸಚಿವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ರಕ್ಷಣಾ ಪಡೆಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಹುದ್ದೆ ಹೇಗೆ ಕಾರ್ಯನಿರ್ವಹಿಸಲಿದೆ ಎಂದರೆ, ಸೇನಾ ಮುಖ್ಯಾಧಿಕಾರಿ ಪ್ರಸ್ತುತ ಇರುವ ಸೇನೆಯ ಮೂರು ವಿಭಾಗದ ಸಂಬಂಧಿಸಿದಂತೆ ಕೇಂದ್ರ ಸರಕಾರಕ್ಕೆ ಸಲಹೆ ನೀಡುವ ಏಕೈಕ ಸಮನ್ವಯಾಧಿಕಾರಿಯಾಗಿರುತ್ತಾರೆ. ಭಾರತದ ಆರ್ಮಿ, ನೌಕಾದಳ ಮತ್ತು ವಾಯುದಳಕ್ಕೆ ಸಂಬಂಧಿಸಿದ ಸಿಡಿಎಸ್ ಸರ್ಕಾರಕ್ಕೆ ಸಲಹೆ ನೀಡುವ ಸಿಂಗಲ್ ಪಾಯಿಂಟ್ ಅಧಿಕಾರ ಅವರದ್ದಾಗಿರುತ್ತದೆ. ಈ ಸಲಹೆ ಮೇಲೆ ಕೇಂದ್ರ ನಿರ್ಧಾರ ಕೈಗೊಳ್ಳಲಿದೆ. ಆರ್ಮಿ, ನೌಕದಳ ಮತ್ತು ವಾಯುಪಡೆಗೆ ಸಿಡಿಎಸ್(ಮುಖ್ಯ ಸೇನಾಧಿಕಾರಿ) ಮುಖ್ಯಸ್ಥರಾಗಿದ್ದು, 5 ಸ್ಟಾರ್ ಹೊಂದಿರುವ ಮಿಲಿಟರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.
ಕಾರ್ಗಿಲ್ ಯುದ್ಧದ ನಂತರ ಭದ್ರತಾ ಲೋಪ ಮತ್ತು ಸೇನಾಪಡೆಗಳ ನಡುವೆ ಇರುವ ಅಂತರಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೂರೂ ಸೇನಾಪಡೆಗಳ ನಡುವೆ ಹಲವೆಡೆ ಸಂವಹನ ಮತ್ತು ಹೊಂದಾಣಿಕೆಯ ಕೊರತೆಯಾಗಿದ್ದನ್ನು ಗುರುತಿಸಿತ್ತು. ಈ ಹಿನ್ನೆಲೆಯಲ್ಲಿ ಅಂದು ಉಪ ಪ್ರಧಾನಿಯಾಗಿ ಎಲ್.ಕೆ. ಅಡ್ವಾಣಿ ಅವರ ನೇತೃತ್ವದಲ್ಲಿ ಸಚಿವ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಮೂರೂ ಸೇನಾಪಡೆಗಳು ಸೇರಿ ಓರ್ವ ಮುಖ್ಯಸ್ಥರನ್ನು ನೇಮಿಸುವಂತೆ ವರದಿ ನೀಡಿತ್ತು. ಅದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಮಿತಿಯ ವರದಿ ಕಾರ್ಯರೂಪಕ್ಕೆ ಬಂದಿರಲಿಲ್ಲ. ಈಗ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
