ದೆಹಲಿ :
ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಆರೋಗ್ಯ ಚಿಂತಾಜನಕವಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಾಜಿ ಸಚಿವ ಅರುಣ್ ಜೇಟ್ಲಿ ಅವರು ಆಗಸ್ಟ್ 9ರಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಸದ್ಯ ತೀವ್ರ ನಿಗಾ ಘಟಕದಲ್ಲಿರುವ ಜೇಟ್ಲಿ ಅವರ ಆರೋಗ್ಯ ವಿಚಾರಿಸಲು ಅಗಸ್ಟ್ 9ರಂದೇ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
66 ವರ್ಷದ ಅರುಣ್ ಜೇಟ್ಲಿ ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ವಿತ್ತ ಸಚಿವರಾಗಿ ಕಾಯರ್ನಿರ್ವಹಿಸಿದ್ದರು. ಆರೋಗ್ಯ ಸಮಸ್ಯೆಯಿಂದ ಜೇಟ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ