ಬೆಂಗಳೂರು
ವೆಬ್‍ಸೈಟ್ ಮೂಲಕ ಸಂಪರ್ಕಿಸಿ ಮೊಬೈಲ್‍ನಲ್ಲಿ ಹಣ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 10 ಲಕ್ಷ 36 ಸಾವಿರ ನಗದನ್ನು ವಶಪಡಿಸಿಕೊಂಡಿದ್ದಾರೆ.
ಜಯನಗರ 3 ನೇ ಬ್ಲಾಕ್‍ನ ವಿಕಾಸ್ ಜೈನ್(38)ಜಯನಗರ 6 ನೇ ಬ್ಲಾಕ್‍ನ ಹರೀಶ್ ಕುಮಾರ್(44)ತ್ಯಾಗರಾಜ ನಗರದ ಪ್ರವೀಣ್(32)ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 10 ಲಕ್ಷ 36 ಸಾವಿರ ನಗದು 3 ಮೊಬೈಲ್‍ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಆರೋಪಿಗಳು ಜೆಪಿನಗರದ ಸಾಯಿಮೆಡ್ ಲೈಫ್ ಮೆಡಿಕಲ್ ಸ್ಟೋರ್,ಕರ್ನಾಟಕ ಪ್ರಿಮೀಯರ್ ಲೀಗ್‍ನ ಹುಬ್ಬಳ್ಳಿ ಟೈಗರ್ಸ್ ಮತ್ತು ಬಳ್ಳಾರಿ ಟಕ್ಕರ್ಸ್ ತಂಡಗಳ ನಡುವೆ ನಡೆಯುತ್ತಿರುವ ಕ್ರಿಕೆಟ್ ಪಂದ್ಯಕ್ಕೆ ವೆಬ್‍ಸೈಟ್ ಮೂಲಕ ಗೆಲುವು ಮತ್ತು ಸೋಲಿನ ಬಗ್ಗೆ ಬೆಟ್ಟಿಂಗ್‍ಗೆ ಹಣವನ್ನು ಪಣವಾಗಿ ಕಟ್ಟಿಸಿಕೊಳ್ಳುತ್ತಿದರು.ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








