ಬೆಂಗಳೂರು
ನಗರದಲ್ಲಿ ಹೆಚ್ಚಾಗುತ್ತಿರುವ ಸಂಚಾರ ಸಮಸ್ಯೆಗಳ ಬಗ್ಗೆ ಅರಿಯಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಶನಿವಾರ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಂಚಾರ ಸಮಸ್ಯೆಗಳ ಚರ್ಚೆ ನಡೆಸಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಬಿಎಂಪಿ, ಬಿಡಿಎ, ಬಿಎಂಟಿಸಿ, ಬೆಸ್ಕಾಂ ಹಾಗೂ ಬಿಎಂಆರ್ ಸಿಎಲ್ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಉತ್ತರ ನೀಡಿದರು.
ಸಭೆ ಆರಂಭವಾಗುತ್ತಿದ್ದಂತೆ ಸಭೆಯಲ್ಲಿಸಂಚಾರಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರಿನ ಸುರಿಮಳೆ ಸುರಿಸಿದರು. ನಗರದಲ್ಲಿ ಅಡ್ಡಾದಿಡ್ಡಿ ಬೈಕ್ ಸೈಕಲ್ ನಿಲ್ದಾಣ, ಅವೈಜ್ಞಾನಿಕ ರಸ್ತೆ ಉಬ್ಬುಗಳ ನಿರ್ಮಾಣ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಟ್ರಾಫಿಕ್ ಪಾರ್ಕ್ ನಿರ್ಮಾಣ, ಆಂಬ್ಯುಲೆನ್ಸ್ ಜಿಪಿಎಸ್ ಅಳವಡಿಸಬೇಕೆಂದು ಒತ್ತಾಯಿಸಿದರು.
ಬಹುತೇಕ ನಗರ ಸಿಗ್ನಲ್ ಲೈಟ್ ಗಳಲ್ಲಿ ಟೈಮರ್ ಇಲ್ಲ.ಇದರಿಂದ ಪೆಟ್ರೋಲ್ ಅನಗತ್ಯ ಪೋಲಾಗುತ್ತಿದೆ ಎಂದು ಗಮನ ಹರಿಸಬೇಕೆಂದು ಮನವಿ ಮಾಡಿದರು.ಸಂಚಾರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಪ್ರಶ್ನೆಗಳಿಗೆ ಅಧಿಕಾರಿಗಳು ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾತನಾಡಿ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜನಸ್ಪಂದನ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಸಭೆಯಲ್ಲಿ ನಾಗರಿಕರು ವಿವಿಧ ಸಮಸ್ಯೆ ಹಾಗೂ ಸಲಹೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಮಸ್ಯೆಗಳ ಬಗ್ಗೆ ಪರಿಹಾರಕ್ಕಾಗಿ ಅಲ್ಪಕಾಲಿಕ ಹಾಗೂ ದೀರ್ಘಕಾಲಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








