ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 1800 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿದು ಬಂದಿದೆ.ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಹೆಚ್ಚುವರಿ ಬಸ್ಗಳು ಸಂಚಾರ ನಡೆಸಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ,ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಗೆ ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಸಂಚಾರ ಮಾಡಲಿದ್ದು ಇನ್ನೂ ಬೇರೆ ಬೇರೆ ಕಡೆಗೆ ಆಯಾ ಪ್ಲಾಟ್ ಫಾರಂಗಳಲ್ಲಿ ವ್ಯವಸ್ಥೆ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








