ಮುಂದುವರಿದ ಭಾರೀ ಮಳೆ : ಭಟ್ಕಳದಲ್ಲಿ ಹೆದ್ದಾರಿ ಜಲಾವೃತ!!

ಕಾರವಾರ: 

      ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ ಭಾಗದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ಭಟ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ 66 ಜಲಾವೃತವಾಗಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ.

      ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದರಿಂದಾಗಿ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ. ಇತ್ತ ಹೊನ್ನಾವರದ ಮಂಕಿ ಗ್ರಾಮ ಹಾಗೂ ಶರಾವತಿ ನದಿ ತಡದ ಪ್ರದೇಶಗಳಿಗೆ ನೀರು ನುಗ್ಗಿದ್ದು, ಇಡೀ ಗ್ರಾಮವೇ ನೀರಿನಿಂದ ತುಂಬಿ ಹೋಗಿದೆ.

      ಇನ್ನೂ ಎರಡು ದಿನ ಅಬ್ಬರದ ಮಳೆ ಬೀಳುವ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ನೆರೆ ಪೀಡಿತ ಕದ್ರಾ ಪ್ರವಾಹ ಪ್ರದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಭೇಟಿ ನೀಡಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link