ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸದುಪಯೋಗ ಪಡಿಸಿಕೊಳ್ಳಿ: ಜಿಲ್ಲಾಧಿಕಾರಿ

ಬಳ್ಳಾರಿ

    ಬಳ್ಳಾರಿ ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ – 2020 ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಡಿಸಿ ನಕುಲ್ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು.

     ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮವು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದ್ದು, ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರ್ಪಡೆ, ತೆಗೆದು ಹಾಕುವಿಕೆ, ಪರಿಶೀಲನೆ ಮತ್ತು ಧೃಡೀಕರಣ ಹಾಗೂ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.

    ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಚುನಾವಣಾ ಆಯೋಗದ ನೂತನ ಆಂಡ್ರಾಯ್ಡ್ ಅಪ್ಲಿಕೇಷನ್ ವೋಟರ್ ಹೆಲ್ಪ್‍ಲೈನ್‍ನ್ನು ಡೌನ್‍ಲೋಡ್ ಮಾಡಿಕೊಂಡು ಪರಿಶೀಲಿಸಿ ಧೃಡೀಕರಿಸಿಕೊಳ್ಳಬಹುದಾಗಿರುತ್ತದೆ ಮತ್ತು ವೆಬ್‍ಸೈಟ್‍ನಲ್ಲೂ ಕೂಡ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದ ಬಗ್ಗೆ ಯಾವುದೇ ಮಾಹಿತಿ ಬೇಕಿದ್ದಲ್ಲಿ “ಮತದಾರರ ಸಹಾಯವಾಣಿ – 1950” ಟೋಲ್ ಫ್ರೀ ಸಂಖ್ಯೆಗೆ ಕರೆಮಾಡಿ ಸಂಪರ್ಕಿಸಬಹುದಾಗಿರುತ್ತದೆ ಅಥವಾ ಸ್ಥಳೀಯ ಮಹಾನಗರ ಪಾಲಿಕೆ ಆಯುಕ್ತರ ಕಛೇರಿ, ಸಹಾಯಕ ಆಯುಕ್ತರ ಕಛೇರಿ, ತಹಶೀಲ್ದಾರರ ಕಛೇರಿಗಳಿಗೆ ಭೇಟಿ ನೀಡಬಹುದಾಗಿರುತ್ತದೆ ಎಂದು ತಿಳಿಸಿದರು ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ಸಹಾಯಕ ಆಯುಕ್ತರಾದ ರಮೇಶಕೋನರೆಡ್ಡಿ, ತಹಸೀಲ್ದಾರ್ ನಾಗರಾಜ ಮತ್ತಿತರರು ಇದ್ದರು

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link