ಬೆಂಗಳೂರು
ಅಶೋಕ್ನಗರದ ಬ್ರಿಗೇಡ್ ರಸ್ತೆಯಲ್ಲಿನ ಡಬಲ್ ಡಕ್ಕರ್ ಹುಕ್ಕಾ ಬಾರ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಆರೋಪಿ ಯೊಬ್ಬನನ್ನು ಬಂಧಿಸಿ ಪರಾರಿಯಾಗಿರುವ ಮಾಲೀಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.ಆವಲಹಳ್ಳಿಯ ಮುನೇಶ್ವರ ಬ್ಲಾಕ್ನ ರಂಗಸ್ವಾಮಿ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ತಲೆಮರೆಸಿಕೊಂಡಿರುವ ಸುನಿಲ್ ಜತೆ ಸೇರಿ ಬ್ರಿಗೇಡ್ ರಸ್ತೆಯಲ್ಲಿ ಡಬಲ್ ಡಕ್ಕರ್ ಹುಕ್ಕಾ ಬಾರ್ ಲಾಂಜ್ ತೆರೆದು ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಹುಕ್ಕಾ ಸೇದಲು ಅವಕಾಶ ಮಾಡಿಕೊಟ್ಟಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿ ರಂಗಸ್ವಾಮಿಯನ್ನು ಬಂಧಿಸಿ, ತಲೆಮರೆಸಿಕೊಂಡಿರುವ ಮಾಲೀಕ ಸುನಿಲ್ಗಾಗಿ ಶೋಧ ನಡೆಸಲಾಗಿದ್ದು, ಅಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








