ದಕ್ಷಿಣ ಕನ್ನಡ :
ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಐಎಎಸ್ ಅಧಿಕಾರಿ ಸಸಿಕುಮಾರ್ ಸೆಂಥಿಲ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.
ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಎಫ್‌ಎಸ್ ಅಧಿಕಾರಿ ಅವತಾರ್ ಸಿಂಗ್ ಬೆಂಗಳೂರಿನ ಯಲಹಂಕದ ಪ್ರೆಸ್ಟೀಜ್ ಮೌಂಟ್ ಕಾರ್ಲೋ ಅಪಾರ್ಟ್‌ಮೆಂಟ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ತವ್ಯದಲ್ಲಿನ ಒತ್ತಡಕ್ಕೆ ಆತ್ಮಹತ್ಯೆ ಎಂಬ ಮಾತುಗಳು ಕೇಳಿಬರುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ನಿನ್ನೆಯಷ್ಟೇ ಕೆಲಸಕ್ಕೆ ಬಂದಿದ್ದ ಅವತಾರ್ ಸಿಂಗ್, ಇಂದು ಬೆಳಗ್ಗೆ ಸುಮಾರು 11.30 ರ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಜರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ