ಮೈಸೂರು:

ವಿಷಪ್ರಾಷನದಿಂದ 3 ಚಿರತೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ಸಮೀಪದ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಚೆನ್ನನಂಜಪ್ಪ ಮತ್ತು ಮಹಮದ್ ಪಾಷ ಎಂಬುವವರ ಜಮೀನಿನಲ್ಲಿ ಸುಮಾರು 10 ವರ್ಷದ ತಾಯಿ ಚಿರತೆ ಸೇರಿದಂತೆ 8 ತಿಂಗಳ ಒಂದು ಗಂಡು ಹಾಗು ಒಂದು ಹೆಣ್ಣು ಚಿರತೆಗಳ ಕಳೇಬರ ಪತ್ತೆಯಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗಳ ಕಳೇಬರಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ. ಮೋಲ್ನೋಟಕ್ಕೆ ಚಿರತೆಗಳು ಅಸ್ವಾಭಾವಿಕವಾಗಿ ಮೃತಪಟ್ಟಿರುವುದು ಕಂಡು ಬಂದಿದೆ.
ಆದರೆ ನಾಯಿಗಳ ಹಾವಳಿ ತಪ್ಪಿಸಲು ಅವುಗಳಿಗೆ ವಿಷಾಹಾರ ಇಡಲಾಗಿದ್ದು, ಅದನ್ನು ತಿಂದು ನಾಯಿಗಳು ಸಾವನ್ನಪ್ಪಿದ್ದವು. ಈ ನಾಯಿಗಳನ್ನು ಚಿರತೆಗಳು ತಿಂದಿದ್ದು, ಅವುಗಳೂ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.
ಮೃತ ಚಿರತೆಗಳ ಮರಣೋತ್ತರ ಪರೀಕ್ಷೆ ವೇಳೆ ಕೆಲ ಅಂಗಾಂಗಗಳನ್ನು ಸಂಗ್ರಹಿಸಲಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಚಿರತೆಗಳು ಮೃತಪಟ್ಟಿರುವ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








