ಚಿತ್ರದುರ್ಗ:
ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಹಿರಿಯ ಸಚಿವರುಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಮಾಧುಸ್ವಾಮಿ, ಬಸವರಾಜ್ ಬೊಮ್ಮಾಯಿ, ಸಚಿವ ಬಿ.ಶ್ರೀರಾಮುಲು ಇವರುಗಳು ಸೆ.11 ರಂದು ಮಾದಾರ ಚನ್ನಯ್ಯ ಗುರುಪೀಠಕ್ಕೆ ಆಗಮಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ಮಠಾಧೀಶರು ಹಾಗೂ ಈ ಸಮುದಾಯದ ವರೊಡನೆ ಸಭೆ ನಡೆಸಿ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ತಿಳಿಸಿದರು.
ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ.ನೇತೃತ್ವದ ಸರ್ಕಾರವಿದ್ದಾಗ ಎಸ್.ಸಿ./ಎಸ್.ಟಿ./ಓ.ಬಿ.ಸಿ. ಮಠಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ನೀಡಿದೆ. ಈಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಎಲ್ಲಾ ಜನಾಂಗದವರನ್ನು ಒಟ್ಟಿಗೆ ತೆಗದುಕೊಂಡು ಹೋಗುತ್ತಿದ್ದಾರೆ.
ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಮಧ್ಯಾಹ್ನ 12 ರಿಂದ ಸಂಜೆ ನಾಲ್ಕಕರತನಕ ಸಭೆ ನಡೆಯಲಿದೆ. ಎಲ್ಲಾ ಹಿಂದುಳಿದ ಸಮುದಾಯದ ಸ್ವಾಮಿಗಳು ಪಾಲ್ಗೊಳ್ಳುವರು. ಹಲವಾರು ವಿಚಾರಗಳ ಬಗ್ಗೆ ನಾಯಕರುಗಳು ಚರ್ಚಿಸಿ ಮಾಹಿತಿ ಪಡೆದುಕೊಂಡು ಮುಖ್ಯಮಂತ್ರಿ ಜೊತೆ ಸಮಾಲೋಚಿಸಿ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವರು ಎಂದು ಹೇಳಿದರು.
ಸಂಸದರುಗಳಾದ ಎ.ನಾರಾಯಣಸ್ವಾಮಿ, ಜಿ.ಎಂ.ಸಿದ್ದೇಶ್ವರ್, ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಪೂರ್ಣಿಮ ಶ್ರೀನಿವಾಸ್ ಇವರುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.ಬಿಜೆಪಿ.ಹಿಂದುಳಿದ ಮೋರ್ಚ ಜಿಲ್ಲಾಧ್ಯಕ್ಷ ಸಂಪತ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
