ಅರಣ್ಯ ಸಿಬ್ಬಂದಿ ಪರಿಹಾರ ಧನ 20 ರಿಂದ 30 ಲಕ್ಷಕ್ಕೆ ಹೆಚ್ಚಳ!!?

ಬೆಂಗಳೂರು:

      ಕರ್ತವ್ಯದ ವೇಳೆ ಹುತಾತ್ಮರಾಗುವ ಅರಣ್ಯ ಸಿಬ್ಬಂದಿಗಳ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

     ಅವರು ಇಂದು ನಗರದ ಹೌಸಿಂಗ್ ಬೋರ್ಡ್ ಕಾಲನಿಯ ಫಾರೆಸ್ಟ್ ನರ್ಸರಿ ಆವರಣದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಹುತಾತ್ಮರ ದಿನದ ಆಚರಣೆಯಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದ ನಂತರ ಮಾತನಾಡಿದರು.

     ರಾಜ್ಯದಲ್ಲಿ ಒಟ್ಟು ಭೌಗೋಳಿಕ ವಿಸ್ತೀರ್ಣದ ಶೇ. 22ರಷ್ಟು ಅರಣ್ಯ ಪ್ರದೇಶ ಇರುವುದು ನೆಮ್ಮದಿ ನೀಡುವ ವಿಚಾರ. ಇದಕ್ಕಾಗಿ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಯ ಕಾಯಕ ಶ್ಲಾಘನೀಯ. ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಅಲ್ಲದೆ, ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೂ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ