ಬೆಂಗಳೂರು
ಸಾರಿಗೆ ಸಂಸ್ಥೆಗಳಲ್ಲಿನ ನಷ್ಟ ಸೋರಿಕೆ ತಡೆಗಟ್ಟುವ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಆದಷ್ಟು ಬೇಗ ನಷ್ಟ ಸೋರಿಕೆಯ ಕ್ರಮಗಳ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ನಗರದಲ್ಲಿ ಕೆಎಸ್‍ಆರ್‍ಟಿಸಿ-ಬಿಎಂಟಿಸಿ ಸಂಸ್ಥೆಗಳ ಕಾರ್ಯಚಟುವಟಿಕೆ ಅವಲೋಕಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ನಷ್ಟ ಸೋರಿಕೆಯನ್ನು ಅಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ತಡೆಯಲು ಮುಂದಾಗಬೇಕು ಎಂದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಎಲೆಕ್ಟ್ರಿಕ್ ಬಸ್‍ಗಳ ಸಂಚಾರಕ್ಕೆ ಯೋಜನೆ ರೂಪಿಸಬೇಕು ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೊಳಿಸಲು ಸಲಹೆ ಮಾಡಿದರು. ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಸೂಚನೆ ನೀಡಿದರು.
ಸಾರಿಗೆ ಸಂಸ್ಥೆ ಬಸ್‍ಗಳಿಂದ ಉಂಟಾಗುತ್ತಿರುವ ವಾಯು ಮಾಲಿನ್ಯದ ಬಗ್ಗೆ ಬರುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದ ಅವರು, ನೆರೆ-ಪ್ರವಾಹ ಇನ್ನಿತರ ಅನಾಹುತಗಳಿಂದ ಸಂಸ್ಥೆಗೆ ಉಂಟಾಗಿರುವ ನಷ್ಟವನ್ನು ಸರಿದೂಗಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಚಿಂತನೆ ನಡೆಸಬೇಕೆಂದು ಸಚಿವರು ಸೂಚನೆ ನೀಡಿದರು.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸೇರಿ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








