ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ..!

ಚಿತ್ರದುರ್ಗ

    ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ನಿರ್ಲಕ್ಷ ತೋರುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರುಮಾಜಿ ಸಚಿವ ಹೆಚ್.ಅಂಜನೇಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಬಳಿ ಜಮಾಯಿಸಿದ್ದ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತೆರಳಿ ಪ್ರತಿಭಟನೆ ನಡೆಸಿದರು

    ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಲಕ್ಷಾಂತರ ಮಂದಿ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ವಿಚಾರದಲ್ಲಿ ತಾತ್ಸಾರ ಮನೋಭಾವ ತಾಳಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು ರಾಜ್ಯದ ಸುಮಾರು 17 ಜಿಲ್ಲೆಗಳಲ್ಲಿ ಬಾರೀ ಮೆಳೆಯಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ರೈತರ ಸಾವಿರಾರು ಎಕರೆ ಜಮೀನು ಮತ್ತು ಬೆಳೆ ಕೊಚ್ಚಿಹೋಗಿದೆ. ಕಟ್ಟಡಗಳು, ಮನೆಗಳೂ ಸಹ ನೆರೆಗೆ ಕೊಚ್ಚಿಹೋಗಿದ್ದು, ಜನರು ಬೀದಿಗೆ ಬಿದ್ದಿದ್ದಾರೆ.

     ಇಂತಹ ಸಂಧರ್ಭದಲ್ಲಿ ನೆರವಿಗೆ ಬರಬೇಕಿದ್ದ ಕೇಂದ್ರ ಸರ್ಕಾರ ಇದುವರೆಗೂ ಪರಿಹಾರ ಘೊಷಿಸದೆ ಮೌನವಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಟೀಕಿಸಿದರುಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಅಮಿತ್ ಷಾ ಹಾಗೂ ನಿರ್ಮಲ ಸೀತಾರಾಮ್ ಅವರು ಬಂದು ಪರಿಶೀಲನೆ ನಡೆಸಿ ಹೋಗಿದ್ದು, ಇದುವರೆಗೂ ಪರಿಹಾರ ಘೋಷಣೆ ಮಾಡಿಲ್ಲ. ಮುಖ್ಯಮಂತ್ರಿಗಳೂ ಸಹ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ನೈತಿಕತೆ ಕಳೆದುಕೊಂಡಿದ್ದಾರೆಂದು ಅರೋಪಿಸಿದರು

    ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದ ಗೃಹ ಸಚಿವ ಗೋವಿಂದ ಕಾರಜೋಳ ಅವರಿಗೆ ಈ ಸಂಬಂಧ ಮನವಿ ಪತ್ರಸಲ್ಲಿಸಲಾಯಿತು. ಹೊಳಲ್ಕೆರೆ ಸೇರಿದಂತೆ ಜಿಲ್ಲಾಧ್ಯಂತ ತಾವು ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದ ಕೊಳವೆ ಬಾವಿಗಳನ್ನು ರದ್ದು ಮಾಡಿರುವ ಕ್ರಮವನ್ನು ಖಂಡಿಸಿದ ಹೆಚ್.ಆಂಜನೇಯ ಅವರು ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಆಗ್ರಹಿಸಿದರು

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫಾತ್ಯರಾಜನ್, ಮುಖಂಡರಾದ ಹೆಚ್.ಎನ್.ತಿಪ್ಪೇಸ್ವಾಮಿ, ಕಿರಣ್‍ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ತಾಳಿಕಟ್ಟೆ ಬಿ.ಗಂಗಾಧರ್, ಹಾಲೇಶ್, ಜಿ.ಪಂ.ಮಾಜಿ ಅಧ್ಯಕ್ಷ ತಿಮ್ಮಣ್ಣ, ಅಶೋಕ್ ನಾಯ್ಡು ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap